ರಾಜ್ಯದಲ್ಲಿ ಹೆಚ್ಚಾದ ಪ್ರತಿಭಟನಾ ಕಾವು

Huge Protest against vijayapura rape case

22-12-2017 238

ಚಾಮರಾಜನಗರ: ವಿಜಯಪುರದಲ್ಲಿ ನಡೆದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ-ಕೊಲೆ ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಾಮುಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ, ರಾಷ್ಟ್ರೀಯ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಸರ್ಕಾರ ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಯಾದಗಿರಿಲ್ಲೂ ವಿಜಯಪುರದ ಬಾಲಕಿಯ ಆತ್ಯಾಚಾರ-ಕೊಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಕೊಪ್ಪಳದಲ್ಲೂ ವಿಜಯಪುರ ಬಾಲಕಿ ಕೊಲೆ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೊಪ್ಪಳ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.



ಸಂಬಂಧಿತ ಟ್ಯಾಗ್ಗಳು

protest Yadagiri ಆತ್ಯಾಚಾರ-ಕೊಲೆ ಕಾಮುಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ