ಎಂ.ಜಿ ರೋಡ್ ಗೆ ಪೊಲೀಸ್ ಬಿಗಿ ಭದ್ರತೆ

Tight security in MG road

22-12-2017

ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಇನ್ನಿತರ ಕಡೆಗಳಲ್ಲಿ ಕೈಗೊಳ್ಳುತ್ತಿರುವ ಭದ್ರತಾ ಕಾರ್ಯಗಳ ಸಿದ್ಧತೆಯನ್ನು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಬಾರಿಯ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯುವತಿಯರ ಮೇಲೆ ನಡೆದಂತಹ ಲೈಂಗಿಕ ದೌರ್ಜನ್ಯದಂತಹ ಘಟನೆಯನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮವಾಗಿ ಬಂದೋಬಸ್ತ್ ಮಾಡಲು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಲ್ಲೆಲ್ಲಿ ಸಿಸಿಟಿವಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಬೇಕು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದರು.

ಸಿಬ್ಬಂದಿಗಳು ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಭದ್ರತೆ ನಿಯೋಜನೆಗೆ ಸೂಕ್ತ. ನಗರದಲ್ಲಿ ಹೊಸ ವರ್ಷ ಆಚರಣೆ ಮಾಡಲು ಹೆಚ್ಚಿನ ಜನರು ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಗೆ ಆಗಮಿಸುತ್ತಾರೆ. ಕಳೆದ ಬಾರಿ ಸಾಮೂಹಿಕವಾಗಿ ಮಹಿಳೆಯರು, ಯುವತಿಯರು ಮೇಲೆ ಲೈಂಗಿಕ ದೌರ್ಜನ್ಯ ನಡೆದು ಬೆಂಗಳೂರು ಇಡೀ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಬಾರಿ ಹೆಚ್ಚಿನ ಭದ್ರತೆ ಒದಗಿಸುವಂತೆ ಸ್ವತಃ ಹೈಕೋರ್ಟ್ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ.

ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಅದಕ್ಕೆ ನೇರವಾಗಿ ನಗರ ಪೊಲೀಸ್ ಆಯುಕ್ತರನ್ನು ಹೊಣೆಮಾಡಲಾಗುವುದು ಎಂದು ಎಚ್ಚರಿಕೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಈ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಂಟು ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುವುದು ಎಂದು ಕೋರ್ಟ್‍ಗೆ ಈಗಾಗಲೆ ಪ್ರಮಾಣ ಪತ್ರವನ್ನು ನಗರ ಪೊಲೀಸ್ ಆಯುಕ್ತರು ಸಲ್ಲಿಸಿದ್ದಾರೆ.

ರಿಫ್ಲೆಕ್ಟ್ ಜಾಕೆಟ್ಸ್: ಭದ್ರತೆಯಲ್ಲಿರುವ ಎಲ್ಲಾ ಪೊಲೀಸರಿಗೆ ಇದೆ ಮೊದಲ ಬಾರಿಗೆ ರಿಫ್ಲೆಕ್ಟ್ ಜಾಕೆಟ್ಸ್ ಒದಗಿಸಲಾಗಿದೆ. ಎಂ.ಜಿ.ರೋಡ್ ಮತ್ತು ಬ್ರಿಗೇಡ್ ರಸ್ತೆಯಲ್ಲಿ  750 ಕ್ಕೂ ಹೆಚ್ಚು  ಹೈಡೆಫಿನೇಷನ್ ಸಿಸಿಟಿವಿ ಕ್ಯಾಮರಾ ಸೇರಿದಂತೆ ಅನಿಲ್ ಕುಂಬ್ಳೆ ವೃತ್ತ ಮತ್ತು ಕಾಮರಾಜ ರಸ್ತೆಯಲ್ಲಿ ಬ್ಯಾರಿಕೇಡ್'ಗಳನ್ನು ಅಳವಡಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ