ಮೀಸಲಾತಿಗಾಗಿ ಕರವೇ ಬೃಹತ್ ಪ್ರತಿಭಟನೆ

Massive protest for reservation to kannadigas

22-12-2017

ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿಗೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಾಳೆ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಸೇರಲಿರುವ ಸಾವಿರಾರು ಕಾರ್ಯಕರ್ತರು, ಇಲ್ಲಿಂದ ವಿಧಾನಸೌಧದವರೆಗೆ ಪ್ರತಭಟನಾ ರ‍್ಯಾಲಿ ನಡೆಸಲಿದ್ದಾರೆ ಎಂದು ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ರ‍್ಯಾಲಿಯಲ್ಲಿ ನಾಡಿನ ಹಲವು ಕನ್ನಡ ಪರ ಹೋರಾಟಗಾರರು, ಸಾಹಿತಿಗಳು, ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ. ರ‍್ಯಾಲಿಯುದ್ದಕ್ಕೂ ಕನ್ನಡ ಬಾವುಟ, ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಆಗ್ರಹಿಸುವ ಪೋಸ್ಟರ್, ಬ್ಯಾನರ್‍ಗಳನ್ನು ಕಾರ್ಯಕರ್ತರು ಪ್ರದರ್ಶಿಸಿ, ರಾಜ್ಯಸರ್ಕಾರವನ್ನು ಆಗ್ರಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕನ್ನಡಿಗರಿಗೆ ಸರ್ಕಾರಿ ಸೇರಿದಂತೆ ಎಲ್ಲ ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Narayana Gowda Karave ಮೀಸಲಾತಿ ಉದ್ಯೋಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ