ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಬೆಳಕಿಗೆ

Attempt to rape in auto: Girl escaped

22-12-2017 211

ರಾಯಚೂರು: ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು, ಅತ್ಯಾಚಾರ ಎಸಗಿ ಕೊಲೈಗೈದ ಘಟನೆ ಮಾಸುವ ಮುನ್ನವೇ, ಇಂತಹದ್ದೇ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ  ಈ ದುರ್ಘಟನೆ ನಡೆದಿದೆ. ಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ಮೇಲೆ ಕ್ಯಾದಿಗೇರಾ ನಿವಾಸಿಯಾದ ಆಟೋ ಚಾಲಕ ರಾಚಪ್ಪ ಈ ಕೃತ್ಯ ಎಸಗಿದ್ದಾನೆ. ಆಟೋದಲ್ಲಿ ಕಾಲೇಜಿಗೆ ಬಿಡುವುದಾಗಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಸಿದ್ದಾನೆ, ಈ ವೇಳೆ ಆತನಿಂದ ತಪ್ಪಿಸಿಕೊಳ್ಳಲು, ಆಟೋದಿಂದ ಜಿಗಿದ ವಿದ್ಯಾರ್ಥಿನಿಗೆ ಗಾಯಗಳಾಗಿವೆ. ತಪ್ಪಿಸಿಕೊಂಡ ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ಮಾಹಿತಿಯನ್ನಾಧರಿಸಿ, ದೇವದುರ್ಗ ಪೊಲೀಸರು ಆರೋಪಿ ರಾಚಪ್ಪನನ್ನು ಬಂಧಿಸಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಬಂಧಿತ ಟ್ಯಾಗ್ಗಳು

Rape Auto ದೇವದುರ್ಗ ಅತ್ಯಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ