‘ಪತ್ರ ಓದುವುದರಿಂದ ಪ್ರಯೋಜನವಿಲ್ಲ’22-12-2017 284

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಮಕ್ಕಳಾಟ ಆಡಬಾರದು. ಗಂಭೀರವಾಗಿ ನಡೆದುಕೊಳ್ಳಬೇಕೆಂದು ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಇಂದಿಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ರಾಜ್ಯಕ್ಕೆ ಸದ್ಯಕ್ಕೆ 7.56 ಟಿ.ಎಮ್.ಸಿ. ನೀರು ಬಿಡಿಸಲು ಸ್ಪಷ್ಟ ನಿರ್ಧಾರ ಮಾಡಬೇಕು. ಅದನ್ನು ಬಿಟ್ಟು ಬೀದಿ ಬದಿಯಲ್ಲಿ, ಸಾಮಾವೇಶಗಳಲ್ಲಿ ಪತ್ರ ಓದುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ.

ಸಂವಿಧಾನಾತ್ಮಕ ಹುದ್ದೆ ಹೊಂದಿರದ ವ್ಯಕ್ತಿಗಳಿಗೆ ಪತ್ರ ಬರೆದಿರುವುದನ್ನು ನೋಡಿದರೆ ಈ ಪತ್ರದ ಹಿಂದೆ ಚುನಾವಣಾ ರಾಜಕೀಯದ ವಾಸನೆ ಹೊಡೆಯುತ್ತಿದೆ. ಹಿಂದೆ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಈಗಿನ ಮುಖ್ಯಮಂತ್ರಿಗಳು ಬರೆದ ಪತ್ರಕ್ಕೆ ಉತ್ತರ ನೀಡಿದ ಗೋವಾ ಮುಖ್ಯಮಂತ್ರಿ ಈಗ ಬಿ.ಜೆ.ಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿರುವದನ್ನು ನೋಡಿದರೆ ಇದರ ಹಿಂದೆ ಸದುದ್ದೇಶ ಇಲ್ಲವೆಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಇಂತಹ ವಿಚಾರದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸಬೇಕೆ ವಿನಃ ರಾಜಕಾರಣ ಮಾಡುವುದು ಸರಿಯಲ್ಲ. ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಕಳಸಾ-ಬಂಡೂರಿ ನೀರು ಬಿಟ್ಟಂತೆ ಕೆಲವರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಇದರಿಂದ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ಯಾವುದೇ ವಿಷಯದ ಕುರಿತು ಪ್ರಕಟಣೆ ಕೊಡುವಾಗ ಜನರಿಗೆ ಸ್ಪಷ್ಟವಾಗಿ ಮನವರಿಕೆ ಮಾಡಿಕೊಡಬೇಕು. ಇದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರು ಬಿಜೆಪಿ ಸಮಾವೇಶದಲ್ಲಿ ಗೋವಾ ಮುಖ್ಯಮಂತ್ರಿಯವರ ಪತ್ರ ಓದುವ ಅವಶ್ಯಕತೆ ಇರಲಿಲ್ಲ. ಇದೊಂದು ರಾಜಕೀಯ ಗಿಮಿಕ್ ಹಾಗೂ ಉತ್ತರ ಕರ್ನಾಟಕದ ಜನತೆಗೆ ಬಿ.ಜೆ.ಪಿ ಮಾಡಿದ ಅನ್ಯಾಯ ಎಂದಿದ್ದಾರೆ. ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು 7.56 ಟಿಎಂಸಿ ಕುಡಿಯುವ ನೀರು ಗೋವಾದ ನೀರಾವರಿ ಸಚಿವರು ಕರ್ನಾಟಕಕ್ಕೆ ಒಂದು ಹನಿ ನೀರು ಕೊಡುವುದಿಲ್ಲ ಎಂದು ಹೇಳಿರುವುದನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಹೇಳಿದ್ದಾರೆ.ಸಂಬಂಧಿತ ಟ್ಯಾಗ್ಗಳು

Basavaraj horatti election ಟಿಎಮ್ ಸಿ ಮಹದಾಯಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ