ಮರಕ್ಕೆ ಶಾಲಾ ಬಸ್ ಡಿಕ್ಕಿ

School Bus Accident

23-12-2017

ಉಡುಪಿ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಬಸ್ ಅಪಘಾತವಾಗಿ 15 ಮಕ್ಕಳಿಗೆ ಗಾಯಗಳಾಗಿರುವ ಘಟನೆಯು, ಉಡುಪಿಯಲ್ಲಿ ನಡೆದಿದೆ. ಸದ್ಯ ಮಕ್ಕಳೆಲ್ಲರೂ  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳದ ಕುಕ್ಕೂಂದೂರಿನಲ್ಲಿ ಈ ಅಪಘಾತ ಸಂಭವಿಸಿದೆ. ತುಮಕೂರಿನ ಮಾರಮ್ಮ ದೇವರು ಗ್ರಾಮಾಂತರ ಶಾಲೆಯಿಂದ ಕರಾವಳಿ ಪ್ರದೇಶಕ್ಕೆ ಪ್ರವಾಸ ಆಯೋಜಿಸಿದ್ದು, ಪ್ರಯಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ. 60ಕ್ಕೂ ಅಧಿಕ‌ ಮಕ್ಕಳಿದ್ದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ 15 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಗಾಯಾಳುಗಳು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಿದ್ದು, ಉಳಿದವರು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಮಾರ್ಗದ ಮಧ್ಯೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.


ಸಂಬಂಧಿತ ಟ್ಯಾಗ್ಗಳು

Bus accident School bus ಧರ್ಮಸ್ಥಳ ಪ್ರವಾಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ