ತ್ಯಾಜ್ಯ ನೀರು ಶುದ್ಧೀಕರಣ ಘಟಕ ಉದ್ಘಾಟನೆ

waste water purification unit inaugurated

23-12-2017

ಬೆಂಗಳೂರು: ನಗರದ ಕೆ.ಆರ್.ಪುರಂನಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ನಗರಾಭಿವೃದ್ಧಿ ಸಚಿವರಾದ ಕೆ.ಜೆ.ಜಾರ್ಜ್ ಚಾಲನೆ ನೀಡಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಮೇಡಹಳ್ಳಿಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ತ್ಯಾಜ್ಯ ಸಂಸ್ಕರಣ ಘಟಕ, 15 ದಶ ಲಕ್ಷ ಲೀಟರ್ ಎಂ.ಎಲ್.ಡಿ ಸಾಮರ್ಥ್ಯವುಳ್ಳದ್ದಾಗಿದ್ದು ಉದ್ಘಾಟನೆಗೊಂಡಿದೆ. ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಶಾಸಕ ಬಿ.ಎ ಬಸವರಾಜ, ಬಿ.ಡ್ಲ್ಯೂ.ಎಸ್.ಎಸ್. ಬಿ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಜಾರ್ಜ್ ಅವರು, ಬೆಂಗಳೂರಿನಲ್ಲಿ ಇತ್ತೀಚೆಗೆ ಕೆರೆಗಳು ಕಲುಷಿತ ಗೊಳ್ಳುತ್ತಿರುವುದರಿಂದ ಮೊದಲು ತ್ಯಾಜ್ಯ ಶುದ್ಧೀಕರಣ ಘಟಕವನ್ನು ಪ್ರಾರಂಭ ಮಾಡಿ ನಂತರ ಕೆರೆಗಳ ಸ್ವಚ್ಚತೆಗೆ ಮುಂದಾಗುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೆ 80 ರಷ್ಟು ಕೆರೆಗಳ ಬಳಿ ತ್ಯಾಜ್ಯ ಶುದ್ಧೀಕರಣ ಘಟಕ ತೆರೆಯಲು ಸರ್ಕಾರ ಅನುಮತಿ ನೀಡಿದೆ, ಕೆ.ಆರ್.ಪುರ ಕ್ಷೇತ್ರದ ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ಎಸ್.ಟಿ.ಪಿ ಘಟಕ ಪ್ರಾರಂಭಿಸಿದ್ದು, ಮುಂದಿನ ದಿನಗಳಲ್ಲಿ ಶೇ 100 ರಷ್ಟು ಕೆರೆಗಳಲ್ಲಿ ಎಸ್.ಟಿ.ಪಿ ಘಟಕ ತೆಗೆಯಲಾಗುವುದು ಎಂದರು.

ಇನ್ನು, ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಯಡಿಯೂರಪ್ಪ ರವರಿಗೆ ಪತ್ರ ಬರೆದಿದ್ದಾರೆ ಎಂದು, ಮಾಧ್ಯಮಗಳಿಂದ ತಿಳಿದು ಬಂದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನೀರಾವರಿ ಸಚಿವರು ತಕ್ಷಣ ಗೋವಾ ಸಿಎಂಗೆ ಪತ್ರ ಬರೆದು ನಾವು ಮಾತುಕತೆಗೆ ಸಿದ್ಧವಿರುವುದಾಗಿ ಪತ್ರದ ಮೂಲಕ ತಿಳಿಸಿದ್ದು, ಅವರು ಎಲ್ಲಿಗೆ ಕರೆದರು ಮಾತುಕತೆಗೆ ಸಿದ್ಧ ಎಂದು ಸಿಎಂ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ಸಮಸ್ಯೆ ಇತ್ಯರ್ಥವಾಗಬೇಕು ಅಷ್ಟೇ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

K.J. george Urban development ಶುದ್ಧೀಕರಣ ಸಮಾರಂಭ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ