‘ಯಡಿಯೂರಪ್ಪ ಪೇಚಿಗೆ ಸಿಲುಕಿದ್ದಾರೆ’-ಗುಂಡುರಾವ್

Dinesh Gundu Rao reaction on farmers protest

26-12-2017

ಬೆಂಗಳೂರು: ಮಹಾದಾಯಿ ವಿಚಾರವಾಗಿ ರೈತರ ಪ್ರತಿಭಟನೆ ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಮಹಾದಾಯಿ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು, ಈ ವಿಚಾರದಲ್ಲಿ ಎಲ್ಲಾ ಪಕ್ಷದವರು ಸಹಕರಿಸಬೇಕು, ಯಾರು ಕೂಡ ವೈಯಕ್ತಿಕ ಲಾಭ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈಗಾಗಲೇ ಚರ್ಚೆ ನಡೆಸಿ ಸಿಎಂ ಸಿದ್ದರಾಮಯ್ಯ ಪತ್ರ ಕೂಡ ಬರೆದಿದ್ದಾರೆ, ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕಾಗಿದೆ, ಪ್ರಧಾನಿ ಈಗಾಗಲೇ ಸಭೆಗೆ ಕರೆ ನೀಡಬೇಕಿತ್ತು, ಆದರೆ, ಇಲ್ಲಿಯವರೆಗೂ ಸಭೆ ಕರೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಭೆ ಕರೆದರೆ ಇದಕ್ಕೆ ಚಾಲನೆ ಸಿಗುವ ಸಾಧ್ಯತೆ ಇದೆ, ಇನ್ನು ಗೋವಾ ಸಿಎಂ ಮನೋಹರ್ ಪರಿಕ್ಕರ್ ಸಭೆ ಕರೆದರೆ, ನಾವು ಕೂಡ ಆ ಸಭೆಯಲ್ಲಿ ಭಾಗವಹಿಸುತ್ತೇವೆ, ಮತ್ತು ಅಲ್ಲಿನ ವಿರೋಧ ಪಕ್ಷದ ಮುಖಂಡರನ್ನು ಮನವೊಲಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ ಅವರು, ಮನಸ್ಸಿಗೆ ಬಂದ ಹಾಗೆ ಹೇಳಿಕೆ ಕೊಡಲು ಆಗುವುದಿಲ್ಲ, ಯಡಿಯೂರಪ್ಪ ಭರವಸೆ ಕೊಟ್ಟು ಈಗ ಪೇಚಿಗೆ ಸಿಲುಕಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

Dinesh Gundu Rao KPCC ಕಾರ್ಯಾಧ್ಯಕ್ಷ ವೈಯಕ್ತಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ