‘ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಡ್ಯಾಮೇಜ್’

Shah

26-12-2017

ಬೆಂಗಳೂರು: ಮಹದಾಯಿ ವಿವಾದ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗರಂ ಆಗಿದ್ದಾರೆ. ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಹಾಗೂ ಪಿಯೂಷ್ ಗೋಯೆಲ್ ಮೇಲೆ ಷಾ ಗರಂ ಆಗಿದ್ದು, ರಾಜ್ಯದ ಚುನಾವಣಾ ಉಸ್ತುವಾರಿ ವಹಿಸುವಲ್ಲಿ ವಿಫಲವಾಗಿದ್ದೀರಿ ಎಂದು, ಷಾ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮಹದಾಯಿ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತೆಗೆದುಕೊಂಡ ಕ್ರಮಗಳ ಕುರಿತು ವರದಿ‌‌ ಕೇಳಿರುವ ಅಮಿತ್ ಷಾ, ಮಹದಾಯಿ ವಿಚಾರ ಬ್ಯಾಕ್ ಫೈರ್ ಆಗಿದ್ದು ಹೇಗೆ..? ಬಿಜೆಪಿ ಕಚೇರಿ ಮುಂದೆ ನಡೆಯುತ್ತಿರುವ ರೈತರ ಹೋರಾಟದಿಂದ ರಾಜ್ಯದಲ್ಲಿ ಮತ್ತೆ ಪಕ್ಷಕ್ಕೆ ಡ್ಯಾಮೇಜ್ ಆಗ್ತಿದೆ ಎಂದಿದ್ದಾರೆ. 

ಸಾರ್ವಜನಿಕ ವಲಯದಲ್ಲಿ ಜನರು ಪಕ್ಷ ವಿರೋಧಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಮಾಧ್ಯಮಗಳಲ್ಲಿ ರೈತರ ಪರಿಸ್ಥಿತಿ ಕಂಡು ಜನರ ಅಭಿಪ್ರಾಯ ಬದಲಾಗುತ್ತಿದೆ ಎಂದಿದ್ದು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧವು ಷಾ ಗರಂ ಆಗಿದ್ದಾರೆ. ಈ ಸಂದರ್ಭದಲ್ಲಿ ಅನಂತ್ ಕುಮಾರ್ ಹೆಗಡೆಗೂ ಸುಮ್ಮನಿರುವಂತೆ  ಸೂಚನೆ ನೀಡಿರುವುದಾಗಿಯೂ, ಮತ್ತು ಕೆಲ ಸಲಹೆಗಳನ್ನು ನೀಡಿರುವ ಅಮಿತ್ ಷಾ ಸಭೆಯಲ್ಲಿ ಚರ್ಚಿಸಿ ಸೂಕ್ತ‌ ನಿರ್ಧಾರಗಳನ್ನು ತಿಳಿಸುವಂತೆ ತಿಳಿಸಿದ್ದಾರೆ. ಕೂಡಲೇ ರೈತರ ಪ್ರತಿಭಟನೆ ಹಿಂತೆಗೆದುಕೊಳ್ಳಲು ಮನವೋಲಿವಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ