ಬಸವನಬಾಗೇವಾಡಿ ಸ್ತಬ್ಧ

vijayapura Basavana Bagewadi bandh

26-12-2017

ವಿಜಯಪುರ‌: ವಿಜಯಪುರದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ, ಘಟನೆ ಖಂಡಿಸಿ ಇಂದು ಬಸವನಬಾಗೇವಾಡಿ ಪಟ್ಟಣ ಹಾಗೂ ಇಂಡಿ ತಾಲ್ಲೂಕಿನ ತಾಂಬಾ ಬಂದ್ ಗೆ ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು, ರಸ್ತೆಗಿಳಿದು ಹೋರಾಟ ನಡೆಸಿದ್ದಾರೆ. ಬಸ್ ನಿಲ್ದಾಣದ ಬಳಿ ಟೈರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್ ನಿಂದಾಗಿ, ಬಸವನಬಾಗೇವಾಡಿ ಪಟ್ಟಣದಲ್ಲಿ ಸರ್ಕಾರಿ ಬಸ್ ಹಾಗು ಖಾಸಗಿ ವಾಹನ ಸಂಚಾರ ಸ್ತಬ್ಧವಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಬಾಲಕಿ ಸಾವಿಗೆ ನ್ಯಾಯ ದೊರಕಿಸಬೇಕು, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape Bandh ರ‍್ಯಾಲಿ ಗಲ್ಲು ಶಿಕ್ಷೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ