ಅನಂತಕುಮಾರ್ ಹಗಡೆ ವಿರುದ್ಧ ಡಿಎಸ್ ಎಸ್ ಆಕ್ರೋಶ

DSS protest against Anant Kumar Hegde

26-12-2017 211

ಬೆಂಗಳೂರು: ಸಂವಿಧಾನ ಬದಲಾಯಿಸುತ್ತೇವೆಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಆನಂತ ಕುಮಾರ್ ಹೆಗಡೆ ವಿರುದ್ಧ, ಡಿ.ಎಸ್.ಎಸ್ ಕಾರ್ಯಕರ್ತರು ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರ ಹಾಗೂ ಆನಂತ ಕುಮಾರ್ ಹೆಗಡೆ ಅವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅನಂತ ಕುಮಾರ್ ಹೆಗಡೆ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ