ನಾಳೆ ಉತ್ತರ ಕರ್ನಾಟಕ ಬಂದ್

26-12-2017 361
ಗದಗ: ಮಹದಾಯಿ ವಿವಾದವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವಂತೆ ಆಗ್ರಹಿಸಿ ವಿವಿಧ ರೈತ ಪರ ಸಂಘಟನೆಗಳು, ಕರ್ನಾಟಕ ಜನಹಿತ ವೇದಿಕೆ, ಜಯಕರ್ನಾಟಕ ಸೇರಿದಂತೆ ವಿವಿಧ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲು ನಿರ್ಧರಿಸಿದ್ದು, ಗಜೇಂದ್ರಗಡ ಪಟ್ಟಣದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ ಸಂಘಟನೆಗಳ ಮುಖಂಡರು ಈ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೇ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗಜೇಂದ್ರಗಡ ಪಟ್ಟಣ ಸಂಪೂರ್ಣ ಬಂದ್ ಆಚರಿಸಲಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ವಿಚಾರವಾಗಿ ಗದಗ್ ನಲ್ಲಿ ಮಾತನಾಡಿದ ಕೆ.ಎಸ್.ಪುಟ್ಟಣಯ್ಯ, ನಾಳೆ ಉತ್ತರ ಕರ್ನಾಟಕ ಬಂದ್ ಆಚರಿಸಲಿದ್ದು, ಬಂದ್ ಕರೆಗೆ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಸಂಪೂರ್ಣ ಬೆಂಬಲ ನೀಡಿ ಹೋರಾಟದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಗೋವಾ ಮುಖ್ಯಮಂತ್ರಿ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯಬೇಕಿತ್ತು, ಅಥವ ಪ್ರಧಾನಿ ನರೇಂದ್ರ ಮೋದಿ ಇಲ್ಲವೇ ನ್ಯಾಯಾಧಿಕರಣಕ್ಕೆ ಬರೆಯಬೇಕು ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಅವರಿಗೆ ಪತ್ರ ಬರೆದಿರುವುದು, ಮಹದಾಯಿ ವಿಚಾರವನ್ನು ಯಡಿಯೂರಪ್ಪ ಟ್ರಂಪ್ ಕಾರ್ಡ್ ರೀತಿ ಬಳಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದ ಅವರು, ನಾಳೆ ನಡೆಯುವ ಬಂದ್ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದರು.
ಒಂದು ಕಮೆಂಟನ್ನು ಹಾಕಿ