ನರಗುಂದ-ಗಜೇಂದ್ರಗಡ ಸಂಪೂರ್ಣ ಬಂದ್

Naragunda-Gajendragada compelety bandh

27-12-2017

ಗದಗ: ಮಹದಾಯಿ ಕಳಸಾ-ಬಂಡೂರಿ ಯೋಜನೆ ವಿವಾದ ಹಿನ್ನೆಲೆ, ಇಂದು ಉತ್ತರ ಕರ್ನಾಟಕ ಬಂದ್ ಆಚರಿಸುತ್ತಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣ ಸಂಪೂರ್ಣ ಸ್ಥಬ್ದಗೊಂಡಿದೆ. ನಸುಕಿನ ವೇಳೆಯಲ್ಲೇ ಬೀದಿಗಿಳಿದ ‌ಹೋರಾಟಗಾರರು ಪ್ರತಿಭಟಿಸಿದ್ದಾರೆ. ನರಗುಂದ ಪಟ್ಟಣ ಮಹದಾಯಿ ಕಳಸಾ-ಬಂಡೂರಿ ಹೋರಾಟದ ಕೇಂದ್ರ ಸ್ಥಾನವಾಗಿದೆ. ಯಡಿಯೂರಪ್ಪ, ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆದು, ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿದ್ದಾರೆ.

ಇನ್ನು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣವೂ ಸಹ ಸಂಪೂರ್ಣ ಸ್ತಬ್ಧಗೊಂಡಿದ್ದು, ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಆಕ್ರೋಶಗೊಂಡಿದ್ದಾರೆ. ಈ ವೇಳೆ ಯಡಿಯೂರಪ್ಪ, ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೆ ಮಹದಾಯಿ ವಿವಾದ ಇತ್ಯರ್ಥ್ಯಪಡಿಸುವಂತೆ ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Nargund mahadayai ಗಜೇಂದ್ರಗಡ ವಿಜಯಪುರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ