ಬಾಗಲಕೋಟೆಯಲ್ಲಿ ಯಥಾಸ್ಥಿತಿ

27-12-2017 257
ಬಾಗಲಕೋಟೆ: ಮಹದಾಯಿ ಹೋರಾಟ ಹಿನ್ನೆಲೆ, ಇಂದು ವಿವಿಧ ರೈತ ಸಂಘಟನೆಗಳು ಉತ್ತರ ಕರ್ನಾಟಕ ಬಂದ್ ಗೆ ಕೆರ ನೀಡಿದ್ದು, ಬಾಗಲಕೋಟೆಯಲ್ಲಿ ಎಂದಿನಂತೆ ಯಥಾಸ್ಥಿತಿ ಮುಂದುವರೆದಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ, ಅಟೊ ಸಂಚಾರ, ಅಂಗಡಿ ಮುಂಗಟ್ಟು ಎಂದಿನಂತೆ ಆರಂಭಗೊಂಡಿದ್ದು, ವ್ಯಾಪಾರ ವಹಿವಾಟು ನಡೆಯುತ್ತಿವೆ. ಭದ್ರತಾ ದೃಷ್ಟಿಯಿಂದ ಜಿಲ್ಲೆಯಲ್ಲಿ 1200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು, ಜಿಲ್ಲಾಧಿಕಾರಿ ಶಾಂತಾರಾಮ್ ಹೇಳಿದ್ದಾರೆ. ಆದರೆ ಕಲವೆಡೆ ಕನ್ನಡಪರ ಮತ್ತು ವಿವಿಧ ಸಂಘಟನೆಗಳು ಹೋರಾಟ ನಡೆಸಿದ್ದಾರೆ.
ಒಂದು ಕಮೆಂಟನ್ನು ಹಾಕಿ