ಗದಗ-ಬೆಳಗಾವಿಯಲ್ಲಿ ಪ್ರತಿಭಟನಾ ಕಿಚ್ಚು

Mahadayi: high protest in Gadag and Belagavi

27-12-2017 245

ಗದಗ: ಮಹದಾಯಿ ಕಳಸಾ-ಬಂಡೂರಿ ಯೋಜನೆ ವಿವಾದ ಹಿನ್ನೆಲೆ, ಉತ್ತರ ಕರ್ನಾಟಕ ಬಂದ್ ಆಚರಿಸುತ್ತಿದ್ದು, ಗದಗ ನಗರದಲ್ಲಿ ಜಯಕರ್ನಾಟಕ ಸಂಘಟನೆ, ಮುಳಗುಂದ ನಾಕಾದಲ್ಲಿ ಪರಿಕ್ಕರ್ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿಭಟನಾಕಾರರು, ಪ್ರಧಾನಮಂತ್ರಿ, ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಇನ್ನು ಗದಗ್ ನ ಬಿಜಿಪಿ ಕಚೇರಿ ಮುಂದೆ ಜಮಾಯಿಸಿದ ಹೋರಾಟಗಾರರು, ಪ್ರಧಾನಿ ಮೋದಿ, ಅಮಿತ್ಷಾ, ಯಡಿಯೂರಪ್ಪ, ಸತ್ತರೊ ಎಂದು ಬಾಯಿ ಬಡಕೊಂಡ ಪ್ರತಿಭಟಿಸಿದ್ದಾರೆ. ಅಲ್ಲದೇ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿಯ ಚಿಕ್ಕೋಡಿಯಲ್ಲೂ, ಚಿಕ್ಕೋಡಿ ವಿಭಾಗದಿಂದ ಧಾರವಾಡ ಮತ್ತು ಹುಬ್ಬಳ್ಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೋವಾ ರಾಜ್ಯಕ್ಕೂ ಬಸ್ ಸಂಚಾರ ಸ್ಥಗಿತಗೊಳಿಸಿದ್ದಾರೆ. ಮಹದಾಯಿ ವಿವಾದ ಇತ್ಯರ್ಥಕ್ಕೆ ಆಗ್ರಹಿಸಿ, ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ಮಧ್ಯೆ ಕುಳಿತ ರೈತರು ಪ್ರತಿಭಟನೆ ನಡೆಸಿದ್ದಾರೆ. ವಾಹನ ಸಂಚಾರ ಸ್ಥಗಿತಗೊಳಿಸಿ, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ