ಸಾವಿನ ಬೆಂಕಿ

Short circuit at home 3 died

27-12-2017

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ನಗರದ ಕೆ.ಆರ್.ಪುರಂ ಬಳಿಯ ಟಿನ್ ಫ್ಯಾಕ್ಟರಿ ಸಮೀಪದ ಉದಯನಗರದಲ್ಲಿನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದೆ. ಘಟನೆಯಲ್ಲಿ, ಮುರುಗನ್ ಹಾಗೂ ಸೋಫಿಯಾ ದಂಪತಿ, ಆತನ ಪುತ್ರ ಫ್ಲೋರ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರೂ ಮೃತಪಟ್ಟಿದ್ದರು. ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Fire accident Short circuit ಬೌರಿಂಗ್ ಪ್ಯಾಕ್ಟರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ