‘ಇದೇನು ಗೂಂಡಾ ರಾಜ್ಯವೇ’- ಕರಂದ್ಲಾಜೆ

BJP protest in front of kpcc office

27-12-2017

ಬೆಂಗಳೂರು: ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಬಿ.ಎಸ್.ಯಡಿಯೂರಪ್ಪ ಅವರಿಗೆ ಶಹಬ್ಬಾಸ್ ಗಿರಿ ನೀಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರನ್ನು ಛೂ ಬಿಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರೆ' ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೋವಾ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವುದು ಬೇಡವಾಗಿದೆ. ಕರ್ನಾಟಕದ ಜನರಿಗೆ ಕುಡಿಯುವ ನೀರು ಕೊಡುವುದು ನಿಮ್ಮ ಕರ್ತವ್ಯವಲ್ಲವೇ?' ಎಂದು ಪ್ರಶ್ನಿಸಿದರು.

ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಬರುತ್ತಿದ್ದ ಕಾರ್ಯಕರ್ತರನ್ನು ತಡೆಯುತ್ತಾರೆ. ಸಿದ್ದರಾಮಯ್ಯ ಅವರು ಪೊಲೀಸರನ್ನು ಬಿಟ್ಟು ಬೆದರಿಸುತ್ತಾರೆ. ಇದೇನು ಗೂಂಡಾ ರಾಜ್ಯವೇ?' ಎಂದು ಕೇಳಿದರು. ಪಕ್ಷಾತೀತವಾಗಿ ನಾವು ಕುಡಿಯುವ ನೀರಿನ ವಿಚಾರದಲ್ಲಿ ಹೋರಾಟ ಮಾಡಬೇಕಿತ್ತು. ಆದರೆ, ಗೋವಾ ಕಾಂಗ್ರೆಸ್ ನಾಯಕರ ಮನವೊಲಿಸಲು ನಿಮಗೆ ಏಕೆ ಸಾಧ್ಯವಾಗಿಲ್ಲ?' ಎಂದು ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ರೈತರು ಪ್ರತಿಭಟನೆ ನಡೆಸುವಾಗ ಏಕೆ ಬರಬೇಕಿತ್ತು. ಪಕ್ಷದ ಕಚೇರಿ ಮುಂದೆ ರೈತರನ್ನು ಕರೆಸಿ ಪ್ರತಿಭಟನೆ ಮಾಡಿಸಿದ್ದು ನಿಮ್ಮ ರಾಜಕೀಯ ಕುತಂತ್ರವಲ್ಲವೇ?' ಎಂದಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.


ಸಂಬಂಧಿತ ಟ್ಯಾಗ್ಗಳು

shobha karandlaje KPCC ಕಾರ್ಯಾಧ್ಯಕ್ಷ ಕುತಂತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ