‘ಸಿದ್ದು-ರಾಹುಲ್ ಕುಮ್ಮಕ್ಕಿನಿಂದ ನೀರಿಗೆ ಅಡ್ದಿ’

yeddyurappa blames cm siddaramaiah

27-12-2017

ದಾವಣಗೆರೆ: ಮಹದಾಯಿ-ಕಳಸಾ ಬಂಡೂರಿ ವಿವಾದ ಕಾಂಗ್ರೆಸ್ ಸರ್ಕಾರದ ಪಾಪದ ಕೊಡುಗೆ, ರಾಹುಲ್, ಸಿದ್ದರಾಮಯ್ಯ ಕುಮ್ಮಕ್ಕಿನಿಂದ ಗೋವಾ ಕಾಂಗ್ರೆಸ್ಸಿಗರು ನೀರು ಕೊಡೋದಕ್ಕೆ ಅಡ್ಡಿ‌ ಮಾಡುತ್ತಿದ್ದಾರೆ ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿಜೆಪಿ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಒಂದು ಲಕ್ಷ ‌ಜನರನ್ನು ಸೇರಿಸಿ ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲು ಮಾಡ್ತಿನಿ, ಗೋವಾ ಚುನಾವಣೆ ವೇಳೆ ಸೋನಿಯಾ ಗಾಂಧಿ ರಾಜ್ಯಕ್ಕೆ ಮಾಡಿದ ಅನ್ಯಾಯದ ಬಗ್ಗೆ ಎಲ್ಲರಿಗೂ ತಿಳಿಹೇಳುವೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಜನತೆ ಬಿಜೆಪಿ ವಿರುದ್ಧ ಅಲ್ಲ, ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು, ಕಾಂಗ್ರೆಸ್ ಸರ್ಕಾರ ಕುಡಿಯೋ ನೀರಲ್ಲೂ ರಾಜಕೀಯ ಮಾಡುತ್ತಿದೆ. ಗೋವಾ ಕಾಂಗ್ರೆಸ್ಸಿಗರಿಗೆ ವಿರೋಧ ಮಾಡುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಕುಮ್ಮಕ್ಕು ನೀಡಿದ್ದಾರೆ ಎಂದು ಆಪಾದಿಸಿದ್ದಾರೆ. ರ‍್ಯಾಲಿಯುದ್ದಕ್ಕೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B.S.yeddyurappa Mahadayi protest ಬಂಡವಾಳ ರಾಜಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ