ನಾಳೆ ಬೆಂಗಳೂರಲ್ಲಿ ಕರಾಳ ದಿನ- ವಾಟಾಳ್

Mahadayi protest in bangalore tomorrow-vatal nagaraj

27-12-2017 239

ಚಾಮರಾಜನಗರ: ಮಹಾದಾಯಿ ವಿಚಾರ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ರಾಜಕೀಯ ವಸ್ತುವಾಗಿದೆ ಎಂದು, ಕನ್ನಡ ಪರ ಹೋರಾಟಗಾರ, ಕನ್ನಡ ವಾಟಾಳ್ ಪಕ್ಷದ ಮುಖಂಡ, ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ಚಾಮರಾಜನಗರ ಜಿಲ್ಲೆ, ಅರಕಲವಾಡಿ ಗ್ರಾಮದಲ್ಲಿಂದು ಮಾತನಾಡಿದ ಅವರು, ಉತ್ತರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇದೆ. ಸಂಸದರು ಪ್ರಧಾನಿ ಮೇಲೆ ಒತ್ತಡ ತರದೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಹದಾಯಿ ಹೋರಾಟ ಬೆಂಬಲಿಸಿ ನಾಳೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರಾಳ ದಿನ ಆಚರಣೆ ಮಾಡಲಾಗುವುದೆಂದು ತಿಳಿಸಿದರು. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಹೋರಾಟ ಕೇವಲ ರಾಜಕೀಯ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಗಳನ್ನು ಹುಟ್ಟುಹಾಕುವುದೇ ಬಿಜೆಪಿ ಮತ್ತು ಕಾಂಗ್ರೆಸ್‌ ಕೆಲಸ, ಮಹದಾಯಿ ವಿಚಾರದಲ್ಲಿ ಜನತೆ ಎರಡು ಪಕ್ಷಗಳಿಗೂ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.ಸಂಬಂಧಿತ ಟ್ಯಾಗ್ಗಳು

Vatal Nagaraj mahadayi ಉತ್ತರ ಕರ್ನಾಟಕ ಸಂಸದರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ