ಪ್ರಹ್ಲಾದ್ ‌ಜೋಶಿ ಕಚೇರಿಗೆ ಮುತ್ತಿಗೆ

Protesters attack on Prahlad Joshi office in hubballi

27-12-2017

ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟಗಾರರಿಂದ, ಧಾರವಾಡದ ಬಿಜೆಪಿ‌ ಸಂಸದ ಪ್ರಹ್ಲಾದ್ ‌ಜೋಶಿ ಕಚೇರಿಗೆ ಮುತ್ತಿಗೆ ಹಾಕಿದ್ದು, ಕಚೇರಿಯ ಗಾಜು ಪುಡಿ ಪುಡಿ ಮಾಡಿದ್ದಾರೆ. ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಕಚೇರಿಗೆ ವಿವಿಧ‌ ಸಂಘಟನೆಗಳ ಸಾವಿರಾರು‌ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಕಿಟಕಿ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇದೇ ವೇಳೆ ಕಚೇರಿಯ ಬಾಗಿಲು ಮುರಿದು ಒಳ ಪ್ರವೇಶ ಮಾಡಲು ಯತ್ನಿಸಿದ್ದಾರೆ. ಅಷ್ಟರಲ್ಲಾಗಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ತಡೆದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಮುಂಜಾಗ್ರತಾ ಕ್ರಮವಾಗಿ ಸಂಸದರ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

prahlad joshi Mahadayi ಕಚೇರಿ ಸಂಸದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ