ಕೈ ಕೊಯ್ದುಕೊಂಡು ಪ್ರತಿಭಟನೆ

farmers protest in hubli railway station

27-12-2017

ಹುಬ್ಬಳ್ಳಿ: ಕಳಸಾ ಬಂಡೂರಿ-ಮಹದಾಯಿ ಹೋರಾಟ ಹಿನ್ನೆಲೆ. ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಹುಬ್ಬಳ್ಳಿ ರೈಲ್ವೆ ನಿಲ್ದಾಣ ಎದುರು ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಕೈ ಕೊಯ್ದುಕೊಂಡ ಪ್ರತಿಭಟಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲು ತಡೆದು ಪ್ರತಿಭಟಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು ಮತ್ತು ಕೆಲಕಾಲದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು. ಇನ್ನು ಪ್ರತಿಭಟನಾ ಸ್ಥಳಕ್ಕೆ ಡಿಸಿಪಿ ರೇಣುಕಾ ಸುಕುಮಾರ್ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.


ಸಂಬಂಧಿತ ಟ್ಯಾಗ್ಗಳು

kalasa banduri Mahadayi ಡಿಸಿಪಿ ಹರಸಾಹಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ