ಕಲಬುರಗಿ ಬಂದ್

Kalaburagi Bandh today

28-12-2017

ಕಲಬುರಗಿ: ವಿಜಯಪುರದಲ್ಲಿ ನಡೆದ ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ, ವಿವಿಧ ದಲಿತ ಸಂಘಟನೆಗಳು ಕಲಬುರಗಿಯಲ್ಲಿಂದು ಬಂದ್ ಆಚರಿಸುತ್ತಿವೆ. ಬಂದ್ ನಿಂದಾಗಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅಲ್ಲದೇ ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಿದ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನಾಕಾರರು ಜವಾವಣೆಗೊಂಡು ಪ್ರಕರಣದಲ್ಲಿನ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಪ್ರತಿಭಟಿಸಿ ಆಗ್ರಹಿಸಿದ್ದಾರೆ. ಇನ್ನು ಎಸ್ಪಿ ಶಶಿಕುಮಾರ್ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ, ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape Murder ಕಟ್ಟೆಚ್ಚರ ಸಂಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ