ಹುಂಡಿಯನ್ನೇ ಕದ್ದೊಯ್ದ ಕಳ್ಳರು

Nelamangala:Robbery in temple

28-12-2017

ಬೆಂಗಳೂರು: ದೇವಸ್ಥಾನದ ಬಾಗಿಲು ಮುರಿದು ಹುಂಡಿ ಕಳ್ಳತನ ಮಾಡಿರುವ ಘಟನೆ  ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿದಲೂರು ಗಂಗಮ್ಮ ದೇವಸ್ಥಾನದಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ತಡತಾತ್ರಿ ದೇವಸ್ಥಾನದ ಬಾಗಿಲುಮುರಿದು ಒಳನುಗ್ಗಿದ ಕಳ್ಳರು, ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹುಂಡಿ ಕದ್ದೊಯ್ದಿದ್ದಾರೆ. ಇನ್ನು ಕಳ್ಳತನ ಮಾಡಿದ್ದ ಹುಂಡಿ ದೇವಸ್ಥಾನದಿಂದ 150 ಅಡಿ ದೂರದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ತ್ಯಾಮಗೊಂಡ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Robbery temple ಹುಂಡಿ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ