ವರದಕ್ಷಿಣೆ ಕಿರುಕುಳ: ಮಹಿಳೆ ಆತ್ಮಹತ್ಯೆ

Dowry harassment: woman commits suicide

28-12-2017

ಮಂಡ್ಯ: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ಮಾನಸ (24) ಎಂದು ಮೃತ ಮಹಿಳೆಯನ್ನು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದ ನಿವಾಸಿ. ಮದುವೆಯಾದಾಗಿನಿಂದಲೂ, ಒಂದಲ್ಲ ಒಂದು ಕಿರುಕುಳ ನೀಡುತ್ತಿದ್ದ ತನ್ನ ಗಂಡ, ತವರು ಮನೆಯಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದನು. ಇದೇ ವಿಚಾರವಾಗಿ ಗಂಡ-ಹೆಂಡತಿ ನಡುವೆ ಆಗಾಗ ಜಗಳವೂ ಆಗುತ್ತಿದ್ದು, ಗಂಡನ ವರದಕ್ಷಿಣೆ ಕಿರುಕುಳ ಹೆಚ್ಚಾಗಿದ್ದು, ನೊಂದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Dowry Harassment ಆತ್ಮಹತ್ಯೆ ದುರ್ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ