ಅನಂತಕುಮಾರ್ ಹೆಗಡೆ: ರಾಜೀನಾಮೆಗೆ ಒತ್ತಾಯ

Congress protest and demanding for resignation of Anant Kumar Hegde

28-12-2017

ವಿಜಯಪುರ: ಸಂವಿಧಾನವನ್ನು ಬದಲಿಸುತ್ತೇವೆ ಎಂಬ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ. ವಿಜಯಪುರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸಚಿವ ಅನಂತಕುಮಾರ್ ಹೆಗಡೆ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನದಿಂದ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅಂಬೇಡ್ಕರ್ ವೃತ್ತದಲ್ಲಿ ಅನಂತಕುಮಾರ್ ಹೆಗಡೆ ಭಾವಚಿತ್ರ ಸುಟ್ಟು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಅನಂತ ಕುಮಾರ್ ಹೆಗಡೆ ವಿರುದ್ಧ ಚಿತ್ರದುರ್ಗದಲ್ಲಿಯೂ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಸಂವಿಧಾನದ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪಾಥ್ಯರಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಡಿಸಿ ವೃತ್ತದಲ್ಲಿ  ಜವಾವಣೆಗೊಂಡ ಕಾರ್ಯಕರ್ತರು, ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Anant Kumar Hegde Congress ಅಂಬೇಡ್ಕರ್ ವಿವಾದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ