ಸದಾಶಿವ ಆಯೋಗ ವರದಿ ಜಾರಿಗೆ ವಿರೋಧ

Sadashiva commission report opposed and protest

29-12-2017

ಬೆಂಗಳೂರು: ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿ, ವರದಿ ಜಾರಿ ಆಗದಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿಗೆ ಲಗ್ಗೆ ಇಟ್ಟಿರುವ ನೂರಾರು ಜನ ಪ್ರತಿಭಟನಾಕಾರರು, ಸಿಟಿ ರೈಲ್ವೇ ನಿಲ್ದಾಣದಿಂದ ಫ್ರೀಡಮ್ ಪಾರ್ಕ್ ವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಲಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ನೂರಾರು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿ, ವರದಿ ಜಾರಿ ಆಗದಂತೆ ಆಗ್ರಹಿಸಲು ಮುಂದಾಗಿದ್ದಾರೆ.

ಪರಿಶಿಷ್ಟ ಜಾತಿಯಲ್ಲೇ ಕೆಲ ಜಾತಿಯವರಿಗೆ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬಂದ ಹಿನ್ನೆಲೆ, 2005ರಲ್ಲಿ ನ್ಯಾ.ಎ.ಜೆ.ಸದಾಶಿವ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು. ಈ ಬಗ್ಗೆ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿರುವ ನ್ಯಾ.ಸದಾಶಿವ ಆಯೋಗ, ನೀಡಿದ ವರದಿ ವಿರುದ್ದ, ಬೋವಿ, ಲಂಬಾಣಿ, ಕೋರಚಿ ಮತ್ತು ಕೊರವ ಜಾತಿಗಳಿಗೆ ಅನ್ಯಾಯವಾಗಲಿದೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರಲ್ಲಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದಾರೆ. ಇನ್ನು ರೈಲ್ವೇ ನಿಲ್ದಾಣದಿಂದ ಫ್ರೀಡ್ಂ ಪಾರ್ಕ್ ವರೆಗೂ ಪ್ರತಿಭಟನಾ ರ‍್ಯಾಲಿ ಹಿನ್ನೆಲೆ, ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 1 ಡಿಸಿಪಿ , ಮೂವರು ಎಸಿಪಿ ಸೇರಿದಂತೆ ಐನೂರು ಜನ ಪೊಲೀಸರನ್ನು ನಿಯೋಜಿಸಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ