ಅತ್ಯಾಚಾರ-ಕೊಲೆ ಖಂಡಿಸಿ ಚಿಂತಾಮಣಿ ಬಂದ್

Chintamani Bandh

30-12-2017 184

ಚಿಕ್ಕಬಳ್ಳಾಪುರ: ವಿಜಯಪುರಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೆಲೆ ಅತ್ಯಾಚಾರ-ಕೊಲೆ ಖಂಡಿಸಿ, ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕು ಬಂದ್ ಗೆ ವಿವಿಧ ದಲಿತ ಸಂಘಟನೆಗಳು ಕರೆ ನೀಡಿದ್ದು, ಪ್ರತಿಭಟನೆ ನಡೆಸಿದ್ದಾರೆ. ತಾಲ್ಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಿಗಳು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಅದಲ್ಲದೇ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳೂ ಬೆಂಬಲಿಸಿದ್ದಾರೆ. ಇನ್ನು ಬಾಗೇಪಲ್ಲಿ ಸರ್ಕಲ್ ನಲ್ಲಿ ಮಕ್ಕಳು ಸ್ಕೇಟಿಂಗ್ ಮಾಡುವ ಮೂಲಕ ವಿಶಿಷ್ಟವಾಗಿ ಪ್ರತಿಭಟಿಸಿದ್ದಾರೆ. ತಾಲ್ಲೂಕಿನಾದ್ಯಂತ ಸಂಚಾರ ಬಂದ್ ಆಗಿದೆ. ಅಪ್ರಾಪ್ತ ಬಾಲಕಿ ದಾನಮ್ಮನನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಅರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಅಗ್ರಹಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಲಾಗಿದೆ.ಸಂಬಂಧಿತ ಟ್ಯಾಗ್ಗಳು

Bandh Rape ಅಪ್ರಾಪ್ತ ಬಾಲಕಿ ಅತ್ಯಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ