ಬಲಮುರಿ-ಮುತ್ತತ್ತಿಯಲ್ಲಿ 2ದಿನ ನಿಷೇಧ

Muthathi-Balamuri: prohibition for 2 days

30-12-2017

ಮಂಡ್ಯ: ಹೊಸವರ್ಷಕ್ಕೆ ಇನ್ನೇನು ಒಂದೇ ದಿನ ಬಾಕಿ ಇದ್ದು, ಹೊಸ ವರ್ಷದ ಸಂಭ್ರಾಚರಣೆಯಲ್ಲಿ ಅನಾಹುತಗಳಾಗುದನ್ನು ತಪ್ಪಿಸಲು, ಪೊಲೀಸರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದ್ದರಿಂದ ಹೊಸ ವರ್ಷಾಚರಣೆಗೆ ಕೆಲವೆಡೆ ನಿಷೇಧ ಹೇರಿದ್ದಾರೆ. ಮಂಡ್ಯ ಜಿಲ್ಲೆಯ ಮುತ್ತತ್ತಿ ಮತ್ತು ಬಲಮರಿ ಪ್ರವಾಸಿ ತಾಣದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಿ ಪೊಲೀಸ್ ಇಲಾಖೆ ಆದೇಶಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಎರಡು ಪ್ರವಾಸಿ ತಾಣದಲ್ಲಿ ನಿಷೇಧ ಹೇರಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 31 ಮತ್ತು ಜನವರಿ 01 ರಂದು ಎರಡು ದಿನ ಈ ಸ್ಥಳದಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ನಿಷೇಧ ಹೇರಿದೆ. ಈ ಸ್ಥಳಗಳಲ್ಲಿ ಪ್ರವಾಸಿಗರ ಹೊಸ ವರ್ಷಾಚರಣೆಗೆ ನಿಷೇಧ ಹೇರುವಂತೆ ಜಿಲ್ಲಾಡಳಿತಕ್ಕೂ ಪತ್ರ ಬರೆದಿದ್ದಾರೆ. ಹೊಸವರ್ಷಾಚರಣೆಯ ಸಂಭ್ರಮದಲ್ಲಿ ಅವಘಡಗಳ ಕಡಿವಾಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ.


ಸಂಬಂಧಿತ ಟ್ಯಾಗ್ಗಳು

Muthathi Balamuri ಪೊಲೀಸ್ ಇಲಾಖೆ ಪ್ರವಾಸಿ ತಾಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ