ಹೊಸ ವರ್ಷಕ್ಕೆ ಪೊಲೀಸರ ಹೊಸ ಐಡಿಯಾ

Police new idea for the new year

30-12-2017

ಬೆಂಗಳೂರು: ಹೊಸವರ್ಷಾಚರಣೆ ವೇಳೆ ಅಹಿತಕರ ಘಟನೆಗಳನ್ನು ತಡೆಯಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ವೈಟ್ ಫೀಲ್ಡ್ ವಿಭಾಗದ ಪೊಲೀಸರು ಹೊಸವರ್ಷಕ್ಕೆ ಹೊಸ ಐಡಿಯಾ ಮಾಡಿದ್ದಾರೆ. ಜನರೊಂದಿಗೆ ಹೊಸ ವರ್ಷಾಚರಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ರೋಡ್ ಶೋ ಮಾಡುವುದರ ಮೂಲಕ ಸಾರ್ವಜನಿಕರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲಿರುವ ಪೊಲೀಸರು, ಜೊತೆಗೆ ಕಾನೂನು ಕ್ರಮದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಹೊಸ ವರ್ಷದಲ್ಲಿ ಅಹಿತಕರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾದರೆ ಕಠಿಣ ಕಾನೂನು ಕ್ರಮದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಈಗಾಗಲೇ ಅಟೋ ಚಾಲಕರು, ಕ್ಯಾಬ್ ಚಾಲಕರು, ಪಬ್, ಹೋಟೆಲ್ ರೆಸ್ಟೋರೆಂಟ್ ಮಾಲೀಕರ ಬಳಿ ಒಂದು ಸುತ್ತಿನ ಸಭೆ ನಡೆಸಿರುವ ಪೊಲೀಸರು, ಹೊಸ ವರ್ಷದ ದಿನದಂದು ಪೊಲೀಸರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ನಗರ ಪೊಲೀಸ್ ವತಿಯಿಂದ ರೋಡ್ ಶೋ ಆಯೋಜನೆ ಮಾಡಲಾಗಿದೆ. ಮಾರತ್ ಹಳ್ಳಿ ಫ್ಲೈ ಒವರ್ ನಿಂದ ಹೆಚ್.ಎ.ಎಲ್ ಕಲ್ಯಾಣ ಮಂಟಪದವರೆಗೂ ರೋಡ್ ಶೋ ನಡೆಯಲಿದೆ. ಸುಮಾರು ಐದು ಕಿ.ಮೀ ರಸ್ತೆ ಮಾರ್ಗವಾಗಿ ರೋಡ್ ಶೋ ಮಾಡಲಿರುವ ಪೊಲೀಸರು, ರಸ್ತೆ ಮಾರ್ಗವಾಗಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು. ಕಾರ್ ನಲ್ಲಿ ಚಲಿಸುವ ಸವಾರರಿಗೆ, ಸ್ಥಳೀಯ ಕಂಪನಿಗಳಲ್ಲಿ ಕೆಲಸ ಮಾಡುವ ಐಟಿ ಉದ್ಯೋಗಿಗಳಿಗೆ ಶುಭಾಶಯ ತಿಳಿಸಿ, ಕಾನೂನು ಕ್ರಮದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕಳೆದ ವರ್ಷ ಎಂ.ಜಿ ರೋಡ್, ಬ್ರಿಗೇಡ್ ರೋಡ್ ನಲ್ಲಿ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆದ ಘಟನೆಯಿಂದ ಪೊಲೀಸರು ಎಚ್ಚೆತ್ತುಕೊಂಡಿರುವಂತಿದೆ.

ರೋಡ್ ಶೋನಲ್ಲಿ ಭಾಗಿಯಾಗಲಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಸಿಮಂತ್ ಕುಮಾರ್ ಸಿಂಗ್, ವೈಟ್ ಫಿಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್, ಇನ್ಸ್‌ ಪೆಕ್ಟರ್ ಗಳು ಮತ್ತು ಪೊಲೀಸರು ಭಾಗಿಯಾಗಲಿದ್ದಾರೆ. ನಾಳೆ ಹೊಸ ವರ್ಷ ಆಚರಣೆ ಪ್ರಯುಕ್ತ ಬಂದೋಬಸ್ತ್ ಗೆ ಪೊಲೀಸರು ನಿಯೋಜನೆ ಇರುವ ಹಿನ್ನೆಲೆ, ಪೊಲೀಸ್ ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷ ಇಂದೇ ಆಚರಣೆ ಮಾಡಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Road Show New year ದೌರ್ಜನ್ಯ ಐಡಿಯಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ