ಕಿಡಿಗೇಡಿಗಳ ಕೃತ್ಯ: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ

Ambedkar photo and board broken: tense in village

01-01-2018

ರಾಯಚೂರು: ರಾಯಚೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಹಟ್ಟಿಯ ಪಾಮನಕಲ್ಲೂರು ಕ್ರಾಸ್ ಬಳಿಯ, ವೃತ್ತದಲ್ಲಿದ್ದ ಅಂಬೇಡ್ಕರ್ ಭಾವಚಿತ್ರ ಮತ್ತು ಬೋರ್ಡ್ ಮುರಿಹಾಕಿದ್ದಾರೆ. ಇನ್ನು ಕಿಡಿಗೇಡಿಗಳ ಈ ಕೃತ್ಯ ಖಂಡಿಸಿ, ವಿವಿಧ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬೀಡುಬಿಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Dr.BR ambedkar humiliation ಕಿಡಿಗೇಡಿ ಭಾವಚಿತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ