ಭೀಕರ ಅಪಘಾತ 5 ಮಂದಿ ದುರ್ಮರಣ

Five people were killed in a horrific accident

01-01-2018

ತುಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯು ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಗವಿಮಠದ ಬಳಿ ನಡೆದಿದೆ. ಮೃತರೆಲ್ಲರು ಕುಣಿಗಲ್ ತಾಲ್ಲೂಕಿನ ಚೌಡನಕುಪ್ಪೆ ಗ್ರಾಮದವರು ಎಂದು ತಿಳಿದು ಬಂದಿದೆ. ಹೊಸ ವರ್ಷದ ಪ್ರಯುಕ್ತ ಕುಟುಂಬ ಸಮೇತ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ಹೊರಟಿದ್ದು, ಕಾರಿಗೆ ಅಡ್ಡಬಂದ ಮಗುವನ್ನು ಉಳಿಸಲು ಹೋಗಿ ಲಾರಿಗೆ ಡಿಕ್ಕಿ ಹೊಡೆದು, ಐವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Accident gavi mutt ಹೊಸ ವರ್ಷ ಗೊರವನಹಳ್ಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ