ಹೊಸ ವರ್ಷಾಚರಣೆ ವೇಳೆ ಹರಿದ ನೆತ್ತರು

A young man murder in Bengaluru

01-01-2018

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ಬೆನ್ನಲ್ಲೆ ಬೆಂಗಳೂರಲ್ಲಿ ನೆತ್ತರು ಹರಿದಿದೆ. ಸಂಭ್ರಮಾಚರಣೆ ವಿಚಾರದಲ್ಲಿ ಗಲಾಟೆಯಾಗಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಒನಕೆಯಿಂದ ಹೊಡೆದು, ಚಾಕುವಿನಿಂದ ಇರಿದು ಯುವಕನನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಚೆ ಪ್ರದೇಶದ ಕ್ವಾರ್ಟರ್ಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಶಿವರಾಮ್(30) ಕೊಲೆಯಾದ ಯುವಕ. ಕೇಕ್ ಕಟ್ ಮಾಡುವ ಸಮಯದಲ್ಲಿ ಗಲಾಟೆ ಉಂಟಾಗಿದ್ದು, ಕೊಲೆ ಮಾಡಿದ ದುಷ್ಕರ್ಮಿಗಳು ತಮಿಳು ಭಾಷೆಯಲ್ಲಿ ಶುಭಾಶಯ ವಿನಮಯ ಮಾಡಿಕೊಳ್ಳಿತ್ತಿದ್ದನ್ನು ಪ್ರಶ್ನಿಸಿ ಕನ್ನಡದಲ್ಲಿ ಮಾತನಾಡುವಂತೆ ತಿಳಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ? ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣ‌ ಸಂಬಂಧ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Mureder New year ಸಂಭ್ರಮಾಚರಣೆ ಒನಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ