ಪಕ್ಷದಲ್ಲಿದ್ದುಕೊಂಡೇ ಪಕ್ಷದ ವಿರುದ್ಧ ಕೆಟ್ಟ ರಾಜಕಾರಣ ಹಿನ್ನೆಲೆ ದಿನೇಶ್ ಗುಂಡೂರಾವ್ ಆಕ್ರೋಶ

Kannada News

17-04-2017

ಬೆಂಗಳೂರು :- ಪಕ್ಷದಲ್ಲಿದ್ದುಕೊಂಡೇ ಪಕ್ಷದ ವಿರುದ್ಧ ಕೆಟ್ಟ ರಾಜಕಾರಣ ಮಾಡುತ್ತಿರುವ ಪಕ್ಷದ ಹಿರಿಯ ನಾಯಕರು ಸುಮ್ಮನಿರದಿದ್ದರೆ ಅವರ ವಿರುದ್ಧ ಶಿಸ್ತುಕ್ರಮ ಅನಿವಾರ್ಯ ಎಂದು ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಪಕ್ಷದ ಹಿರಿಯ ನಾಯಕರ ವರ್ತನೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳದಿದ್ದಲ್ಲಿ ಅವರ ವಿರುದ್ಧ ಕ್ರಮ ಅನಿವಾರ್ಯ ಎಂಬುದರ ಬಗ್ಗೆ ಹೈಕಮಾಂಡ್ ಕೂಡ ಸೂಕ್ಷ್ಮವಾಗಿ ಹೇಳಿದೆ ಎಂದು ಅವರು ತಿಳಿಸಿದರು

.ಪಕ್ಷದ ಹಿರಿಯ ನಾಯಕರ ಹೆಸರುಗಳನ್ನು ಪ್ರಸ್ತಾಪಿಸದೆ ಈ ನಾಲ್ಕೈದು ಮಂದಿ ಹಿರಿಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅನವಶ್ಯಕವಾಗಿ ಟೀಕಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ