ತಡರಾತ್ರಿ ಸಿಕ್ಕಿಹಾಕಿಕೊಂಡ ಕುಡುಕರು

1367 DD cases in field in bengaluru

01-01-2018

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ, ಸಂಚಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ, ಒಂದೇ ರಾತ್ರಿಯಲ್ಲಿ ದಾಖಲೆ ಪ್ರಮಾಣದಲ್ಲಿ ಕೇಸುಗಳು ದಾಖಲಾಗಿವೆ. ಕಳೆದ ರಾತ್ರಿ ಡ್ರಂಕ್ ಅಂಡ್ ಡ್ರೈವ್ ಅಡಿಯಲ್ಲಿ 1367 ಕೇಸುಗಳನ್ನು ಪೊಲೀಸರು ದಾಖಲಿಸಿದ್ದಾರೆ. ಡಿಸೆಂಬರ್ 31ರ ರಾತ್ರಿ ಸಂಭ್ರಮಾಚರಣೆಯಲ್ಲಿ ಮುಳುಗಿ ಹೆಚ್ಚಿನ ಮದ್ಯ ಸೇವಿಸಿ ವಾಹನ ಚಲಾಯಿಸುವವರ ಮೇಲೆ ಕಣ್ಣಿಟ್ಟ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಬೆಂಗಳೂರಿನಾದ್ಯಾಂತ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 4 ಗಂಟೆಯವರೆಗೆ ಸ್ಪೆಷಲ್‌ ಡ್ರೈವ್ ಮಾಡಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದ 1367 ಸವಾರರ ಮೇಲೆ ಕೇಸು ದಾಖಲಿಸಿ, ನ್ಯಾಯಾಲಯದಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ