ಸ್ನೇಹಿತರಿಂದಲೇ ಸ್ನೇಹಿತನ ಕೊಲೆ

Horrific Murder after new year party

01-01-2018

ರಾಮನಗರ: ಯುಕನೊಬ್ಬನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆಯು, ರಾಮನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಗುಡಿಮಾವು ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ನವೀನ್ (27) ಮೃತ ಯುವಕ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ, ನಿನ್ನೆ ರಾತ್ರಿ ಸ್ನೇಹಿತರೊಡನೆ ನವೀನ್ ಪಾರ್ಟಿ ಮಾಡಿದ್ದು, ನಂತರದಲ್ಲಿ ಸ್ನೆಹಿತರೇ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.ಕೊಲೆಗೆ ಕಾರಣಗಳು ತಿಳಿದು ಬಂದಿಲ್ಲ,  ಕಗ್ಗಲಿಪುರದ ಆನಂದ್ ಕುಮಾರ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ನವೀನ್ ನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹಾರೋಹಳ್ಳಿ‌ ಸರ್ಕಲ್ ಇನ್ಸ್ ಪೆಕ್ಟರ್ ನಂದೀಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

murder Party ಇನ್ಸ್ ಪೆಕ್ಟರ್ ಕಟ್ಟಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ