ಸಿಎಂ ವಿರುದ್ಧ ಎಸಿಬಿಗೆ ದೂರು

Complaint against CM in ACB

01-01-2018 188

ಬೆಂಗಳೂರು: ಹೊಸ  ವರ್ಷದ ಮೊದಲ ದಿನವೇ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ(ಎ.ಸಿ.ಬಿ)ದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿ ಉಪಾಧ್ಯಕ್ಷ ಗಣೇಶ್ ಸಿಂಗ್ ಎಂಬುವರು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಮ್ಮ ಪಕ್ಷದ ಸಾಧನೆಗಳ ಜಾಹಿರಾತಿಗೆಂದು ನೂರಾರು ಕೋಟಿ ರೂ.ಸಾರ್ವಜನಿಕರ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿದೆ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರದ ಸಾಧನೆಗಳನ್ನು ರಾಜ್ಯದ ಹಲವು ಪತ್ರಿಕೆಗಳಲ್ಲಿ ಪ್ರಚಾರ ಮಾಡುವ ಸಲುವಾಗಿ 129.46 ಕೋಟಿ ರೂ.ಗಳಷ್ಟು ಸಾರ್ವಜನಿಕರ ತೆರಿಗೆ ಹಣವನ್ನು ಸುಖಾಸುಮ್ಮನೆ ವೆಚ್ಚ ಮಾಡಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಕ್ಷವು ಅನುಷ್ಠಾನಗೊಳಿಸಿರುವ ಯೋಜನೆಗಳ ಪ್ರಚಾರ ಕಾರ್ಯಕ್ಕೆ ತಗಲುವ ವೆಚ್ಚವನ್ನು ಪಕ್ಷದ ನಿಧಿಯಿಂದಲೇ ಭರಿಸಬೇಕಾಗಿರುತ್ತದೆಯೇ ಹೊರತು ಸಾರ್ವಜನಿಕರ ಹಣವನ್ನು ಅವರ ಪಕ್ಷದ ಸಾಧನೆಗಳನ್ನು ತೋರಿಸುವ ಪ್ರಚಾರ ಕಾರ್ಯಗಳಿಗೆ ಬಳಸಿಕೊಳ್ಳುವುದು ಸರಿಯಾದ ಕ್ರಮವಲ್ಲ.

ಕಾಂಗ್ರೆಸ್ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಕ್ಕೆಂದು ಸರ್ಕಾರದ ಖಜಾನೆಯಿಂದ ಬಳಸಿಕೊಂಡಿರುವ ಹಣದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧವೂ ದೂರು ನೀಡಿರುವ ಅವರು ತನಿಖೆಗೆ ಆಗ್ರಹಿಸಿದ್ದಾರೆ.ಸಂಬಂಧಿತ ಟ್ಯಾಗ್ಗಳು

siddramaiah ACB ಭ್ರಷ್ಟಾಚಾರ ವಾರ್ತಾ ಇಲಾಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ