ಮರಕ್ಕೆ ಕಾರು ಡಿಕ್ಕಿ ಮೂವರ ದುರ್ಮರಣ

02-01-2018 714
ಬೆಳಗಾವಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿರುವ ದಾರುಣ ಘಟನೆಯು ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವಿತ್ರಿ ಗುಪ್ತಾ(47), ಶೋಭಾ ಗುಪ್ತಾ, ಆರತಿ ಗುಪ್ತಾ (21) ಮೃತ ದುರ್ದೈವಿಗಳು. ಸಾವಿತ್ರಿ ಗುಪ್ತಾಳ ಪತಿ, ಸಹೋದರ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಮಹಾರಾಷ್ಟ್ರದ ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇವರೆಲ್ಲರು ಮುಂಬೈ ಮೂಲದವರು ಎಂದು ತಿಳಿದು ಬಂದಿದೆ. ಗೋವಾದಿಂದ ನೂತನ ವರ್ಷಾಚರಣೆ ಮುಗಿಸಿ ಮುಂಬೈಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ