‘ತುರ್ತು ಚಿಕಿತ್ಸೆಗೆ ಮಾತ್ರ ಆದ್ಯತೆ’

OPD Bandh:

02-01-2018 198

ರಾಮನಗರ: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ವೈದ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಇಂದು ದೇಶಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಪ್ರತಿಭಟನೆಗಿಳಿದಿದ್ದಾರೆ. ಇನ್ನು ರಾಜ್ಯದಲ್ಲಿಯೂ ಬಹುತೇಕ ಕಡೆ ಖಾಸಗಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ರಾಮನಗರದಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಬೆಳಿಗ್ಗೆ 6 ಗಂಟೆಯಿಂದಲೇ ಒಪಿಡಿ ಬಂದ್ ಮಾಡಿದ್ದು, ಕೇವಲ ತುರ್ತು ಚಿಕಿತ್ಸೆಗೆ ಮಾತ್ರ ಆದ್ಯತೆ ನೀಡಲಾಗುವುದು ಎಂದು, ಇಂಡಿಯನ್ ಮೆಡಿಕಲ್ ಕೌನ್ಸಿಲ್ ಸದಸ್ಯ ಡಾ.ಮಲವೇಗೌಡ ಹೇಳಿದ್ದಾರೆ. ಇನ್ನು ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಅವರು ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಮುಚ್ಚಿರುವುದರಿಂದ, ರೋಗಿಳು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರೋಗಿಗಳಿಗೆ ತೊಂದರೆ ಆಗದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎನ್ನಲಾಗಿದೆ.ಸಂಬಂಧಿತ ಟ್ಯಾಗ್ಗಳು

doctors strike ಒಪಿಡಿ ಜಿಲ್ಲಾಡಳಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ