ವೈದ್ಯರ ಮುಷ್ಕರ: ಕಾರು ಚಾಲಕ ಬಲಿ

Private Doctor

02-01-2018 191

ಬೀದರ್: ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆ, ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೀದರ್ನಲ್ಲಿ ಬೆಳಕಿಗೆ ಬಂದಿದೆ. ಶರಣಪ್ಪ ಚಿಕಿತ್ಸೆ ದೊರೆಯದೇ ಮೃತಪಟ್ಟಿರುವ ದುರ್ದೈವಿ. ಶರಣಪ್ಪ ಬೀದರ್ ಜಿಲ್ಲಾ ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿಯ ಕಾರು ಚಾಲಕ. ಎಂದಿನಂತೆ ಕೆಲಸಕ್ಕೆ ಅವರು ಹಾಜರಾಗಿದ್ದು, ಕೆಲಸದ ವೇಳೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ ವೈದ್ಯರ ಮುಷ್ಕರ ಹಿನ್ನೆಲೆ, ಚಿಕಿತ್ಸೆಗಾಗಿ ಅಲೆದಾಡಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.ಸಂಬಂಧಿತ ಟ್ಯಾಗ್ಗಳು

Heart attack patient died ಮುಷ್ಕರ ಚಿಕಿತ್ಸೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ