ಒಪಿಡಿ ಬಂದ್: ನೀರಸ ಪ್ರತಿಕ್ರಿಯೆ02-01-2018

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸಲು ಮುಂದಾಗಿರುವ ಕೇಂದ್ರದ ಕ್ರಮವನ್ನು ವಿರೋಧಿಸಿ ದೇಶಾದ್ಯಂತ ಖಾಸಗಿ ಆಸ್ಪತ್ರೆಗಳು ಕರೆ ನೀಡಿದ್ದ ಆಸ್ಪತ್ರೆಗಳ ಹೊರ ರೋಗಿಗಳ ಸೇವೆಯ (ಒಪಿಡಿ) ಬಂದ್‍ಗೆ ನೀರಸವಾಗಿದೆ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತೀಯ ವೈದ್ಯಕೀಯ ಪರಿಷತ್ (ಐಎಂಎ)ರದ್ದುಪಡಿಸಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಜಾರಿಗೆ ತರಲು ಲೋಕಸಭೆಯಲ್ಲಿ ಮಂಡನೆ ಮಾಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ -2017ಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿ ನಡೆಸುತ್ತಿರುವ ಒಂದು ದಿನದ ಬಂದ್‍ಗೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಬಂದ್ ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ತುಮಕೂರು, ಬಾಗಲಕೋಟೆ, ಹಾಸನ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಬಳ್ಳಾರಿ, ಮೈಸೂರು, ಚಾಮರಾಜನಗರ, ರಾಮನಗರ, ಗದಗ, ಮಂಡ್ಯ, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಂದ್‍ಗೆ ಮಿಶ್ರ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು, ನರಸಿಂಗ್ ಹೋಮ್‍ಗಳು, ಲ್ಯಾಬ್‍ಗಳು, ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಎಂದಿನಂತೆ ಸೇವೆ ಇಲ್ಲದಿದ್ದರಿಂದ ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುವಂತಾಯಿತು.

ಆಯ ಜಿಲ್ಲೆಗಳ ಖಾಸಗಿ ವೈದ್ಯಾಧಿಕಾರಿಗಳ ಸಂಘದಿಂದ ಕಪ್ಪು ದಿನವನ್ನಾಗಿ ಆಚರಿಸುವ ಮೂಲಕ ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ರಚನೆ ಮಾಡಬಾರದು, ಲೋಕಸಭೆಯಲ್ಲಿ ಮಂಡಿಸಿರುವ ಮಸೂದೆಯನ್ನು ವಾಪಸ್ ಪಡೆಯಬೇಕು. ಮಸೂದೆ ಜಾರಿ ಮಾಡಲೇಬೇಕು ಎನ್ನುವುದಾದರೆ, ಭಾರತೀಯ ವೈದ್ಯಕೀಯ ಮಂಡಳಿಯಲ್ಲಿರುವ ಎಲ್ಲ ನಿಯಮಗಳನ್ನು ವೈದ್ಯಕೀಯ ಆಯೋಗಕ್ಕೆ ಅಳವಡಿಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಬಂದ್ ಬಗ್ಗೆ ಮಾಹಿತಿ ಇಲ್ಲದೆ ಆಸ್ಪತ್ರೆಗಳಿಗೆ ಬಂದ ಜನರು ಪರಿತಪಿಸಿ ಪರದಾಡುವಂತಾಯಿತು. ಹೊರ ರೋಗಿಗಳ ವಿಭಾಗ ಹೊರತುಪಡಿಸಿ ಶಸ್ತ್ರ ಚಿಕಿತ್ಸೆ ಸೇರಿದಂತೆ ಇನ್ನುಳಿದಂತೆ ಚಿಕಿತ್ಸೆಗಳು ಎಂದಿನಂತೆ ನಡೆದವು.

ಬೆಂಗಳೂರಿನಲ್ಲಿ ಸಾಗರ್, ನಾರಾಯಣ ನೇತ್ರಾಲಯ, ಮಣಿಪಾಲ್ ಆಸ್ಪತ್ರೆ, ಫೋರ್ಟೀಸ್, ಅಪೋಲೊ, ಕಿಮ್ಸ್, ಸಾಗರ್, ಮಣಿಪಾಲ, ಸೇರಿದಂತೆ ವಿವಿಧ ಆಸ್ಪತ್ರೆಗಳು ಬಂದ್ ಬೆಂಬಲಿಸದೆ ಕಪ್ಪು ಪಟ್ಟಿ ಧರಿಸಿ ವೈದ್ಯರು ಬೆಂಬಲ ವ್ಯಕ್ತಪಡಿಸಿರಲಿಲ್ಲ. ಎಂದಿನಂತೆ ಕಾರ್ಯ ನಿರ್ವಹಿಸಿದರೂ ಇನ್ನುಳಿದಂತೆ ಕೆಲ ಆಸ್ಪತ್ರೆಗಳು, ಲ್ಯಾಬ್‍ಗಳು, ನರ್ಸಿಂಗ್ ಹೋಮ್‍ಗಳು ವಿಧೇಯಕವನ್ನು ವಿರೋಧಿಸಿ ಬಂದ್ ನಡೆಸಿ ಮಸೂದೆ ವಾಪಸ್ಸು ಪಡೆಯುವಂತೆ ಆಗ್ರಹಿಸಿದರು.


ಸಂಬಂಧಿತ ಟ್ಯಾಗ್ಗಳು

Private hospitals Bandh ಮಣಿಪಾಲ್ ವೈದ್ಯಾಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ