‘ಅಸ್ಪೃಶ್ಯತೆ ಜೀವಂತ: ನೋವಿನ ಸಂಗತಿ’02-01-2018

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಅಸ್ಪೃಶ್ಯತೆ ಆಚರಣೆ ವಿಚಾರವಾಗಿ ವಿಧಾನಸೌಧದಲ್ಲಿಂದು ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ, ಈ ಕುರಿತಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ವರದಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳತ್ತೇವೆ, ಇಂತಹ ಅನಿಷ್ಟ ಪದ್ಧತಿ ಆಧುನಿಕ ಯುಗದಲ್ಲೂ ಚಾಲ್ತಿಯಲ್ಲಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನಗಳ ಪ್ರವೇಶ ವಿಚಾರದಲ್ಲಿ ನಾನೇನು ಹೇಳುವುದಿಲ್ಲ ಆದರೆ, ಶಿಕ್ಷಣ, ಕುಡಿಯುವ ನೀರು, ಊಟದ ವಿಚಾರದಲ್ಲಿ ತಾರತಮ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳತ್ತೇನೆ ಎಂದು ಎಚ್ಚರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.Anjaneya Untouchability ಆಧುನಿಕ ಯುಗ ಅನಿಷ್ಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ