ವಿದ್ಯುತ್ ಸ್ಪರ್ಶಿಸಿ ರೈತ ಸಾವು

current shock farmer died

02-01-2018

ರಾಮನಗರ: ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆಯು, ರಾಮನಗರದಲ್ಲಿ ನಡೆದಿದೆ. ತನ್ನ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಚಂದ್ರಪ್ಪ(55) ಎಂಬ ರೈತ ಮೃತಪಟ್ಟಿದ್ದಾರೆ. ಮೃತ ರೈತ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕಲ್ಯಾ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.  ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಇದನ್ನು ಗಮನಿಸಿದೇ ಅದರ ಮೇಲೆಯೇ ರೈತ ಕಾಲಿಟ್ಟಿದ್ದಾರೆ, ಆಗ ಏಕಾಏಕಿ ವಿದ್ಯುತ್ ಹರಿದು ಸಾವನ್ನಪ್ಪಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Farmer current shock ವಿದ್ಯುತ್ ಹರಿದು ಪೊಲೀಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ