ಬಿಎಂಟಿಸಿ ಬಸ್ ಹರಿದು ಮೃತಪಟ್ಟ ಕೂಲಿ ಕಾರ್ಮಿಕ

Kannada News

17-04-2017

ಬೆಂಗಳೂರು, ಏ. 17 -ಮೈಸೂರು ರಸ್ತೆಯ ಹಳೇ ಟೋಲ್ ಗೇಟ್ ಬಳಿ ಸೋಮವಾರ ಮುಂಜಾನೆ  ವೇಗವಾಗಿ ಬಂದ ಬಿಎಂಟಿಸಿ ಬಸ್ ಹರಿದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಕಸ್ತೂರಬಾನಗರದ ರಾಬರ್ಟ್ (58) ಮೃತಪಟ್ಟವರು. ಸ್ಥಳೀಯ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ರಾಬರ್ಟ್ ಮುಂಜಾನೆ 4.30ರ ವೇಳೆ ಹಳೇ ಟೋಲ್ಗೇಟ್ನ ಶೆಲ್ ಪೆಟ್ರೋಲ್ ಬಂಕ್ ಬಳಿ ರಸ್ತೆ ದಾಟುತ್ತಿದ್ದರು.
ಈ ವೇಳೆ ಮೆಜೆಸ್ಟಿಕ್ನಿಂದ ರಾಜರಾಜೇಶ್ವರಿ ನಗರದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಬರ್ಟ್ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಪ್ರಕರಣ ದಾಖಲಿಸಿರುವ ಬ್ಯಾಟರಾಯನಪುರ ಸಂಚಾರ ಪೊಲೀಸ್ ಇನ್ಸ್‍ಪೆಕ್ಟರ್ ಬಾಲಕೃಷ್ಣ ರಾಜು ಅವರು ಬಸ್ ಚಾಲಕ ಲೋಕೇಶ್ ಗುರುನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ