ಬಂದರಿನಲ್ಲಿ ಹೊತ್ತಿಉರಿದ ಬೋಟ್

udupi: fire in boat at malpe beach

03-01-2018

ಉಡುಪಿ: ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಂಗರು ಹಾಕಿದ್ದ ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೋಟ್ ಧಗಧಗನೆ ಹೊತ್ತಿ ಉರಿದಿದೆ. ಹಿಮಾಲಯ ಪರ್ಶಿನ್ ಬೋಟು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೋಟ್ ನಲ್ಲಿದ್ದ ಮೀನುಗಾರರು ಅಡುಗೆ ಮಾಡುವ ಸಂದರ್ಭದಲ್ಲಿ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಕೂಡಲೆ ಅಗ್ನಿಶಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದೆ. ಬೋಟ್ ಸಂಪೂರ್ಣ ಸುಟ್ಟುಹೋಗಿದ್ದರಿಂದ ಮೀನುಗಾರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Boat fire ಮೀನುಗಾರಿಕೆ ಬೆಂಕಿಗಾಹುತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ