ಮಹಾರಾಷ್ಟ್ರ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ

Protest against Maharashtra in Belagavi

03-01-2018 192

ಬೆಳಗಾವಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಗಲಾಟೆಯನ್ನು ಖಂಡಿಸಿ ಬೆಳಗಾವಿಯಲ್ಲಿ ವಿವಿಧ ದಲಿತಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ನಗರದ ಚನ್ನಮ್ಮ ವೃತ್ತದ ಬಳಿ ಜಮಾಯಿಸದ ದಲಿತ ಪರ ಸಂಘಟನೆಗಳ ಕಾರ್ಯಕರ್ತರು. ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಲಕ್ಷಾಂತರ ಜನ ದಲಿತ ಬಾಂಧವರು ವಿಜಯೋತ್ಸವ ಆಚರಿಸುವ ಸಂಧರ್ಭದಲ್ಲಿ ಮತೀಯ ಶಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ, ಪುಂಡಾಟಿಕೆ ಪ್ರದರ್ಶಿಸಿದ್ದು ಕೂಡಲೇ ಸಮಾಜ ಕಂಟಕರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಮಹಾರಾಷ್ಟ್ರ ಸರ್ಕಾರದ ಹಾಗು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಭೀಮಾ ಕೋರೆಗಾಂವ್ ದಲ್ಲಿ ದಲಿತ ಬಂಧುಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.ಸಂಬಂಧಿತ ಟ್ಯಾಗ್ಗಳು

Koregaon Bhima Maharasthara ವಿಜಯೋತ್ಸವ ದಲಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ