ಪತ್ನಿ ಸೀರೆಯಿಂದ ನೇಣು ಬಿಗಿದುಕೊಂಡ ಪತಿ

A man suicide with saree

03-01-2018 247

ಬೆಂಗಳೂರು: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ರಘು ನೇಣಿಗೆ ಶರಣಾದ ದುರ್ದೈವಿ. ಕೆಲಸದಿಂದ ಬೇಸತ್ತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಲವು ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದ ರಘು, ನಿನ್ನೆ ರಾತ್ರಿ ತನ್ನ ಪತ್ನಿ ಸೀರೆಯಿಂದ ನೇಣುಬಿಗಿದುಕೊಂಡಿದ್ದಾರೆ. ಆವಲಹಳ್ಳಿಯ ಬ್ಯಾಟಾರಾಯನಪುರ ನಿವಾಸಿಯಾದ ರಘು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಎಂದಿನಂತೆ ತನ್ನ ರೂಮಿನಲ್ಲಿ ಮಲಗಲು ಹೋಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟಕ್ಕೆ ಕರೆಯಲು ಹಂಡತಿ ಹೋದಾಗ, ಘಟನೆ ಬೆಳಕಿಗೆ ಬಂದಿದೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಸಂಬಂಧಿತ ಟ್ಯಾಗ್ಗಳು

suicide depress ಖಿನ್ನತೆ ವೆಲ್ಡಿಂಗ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ