ರಾಜ್ಯದ ವಿವಿಧೆಡೆ ಎಸಿಬಿ ದಾಳಿ

Karnataka: ACB raid on different parts of the state

04-01-2018 273

ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ಮಾಡಿರುವ ಎಸಿಬಿ, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಗದಗ, ವಿಜಯಪುರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿ ಸೇರಿದಂತೆ ಸಂಬಂಧ ಪಟ್ಟ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.   

ಬಳ್ಳಾರಿ: ಬಳ್ಳಾರಿ ಉಪವಿಭಾಗಧಿಕಾರಿ ಕುಮಾರಸ್ವಾಮಿ ಮನೆ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು, ಬಳ್ಳಾರಿ ನಿವಾಸ ಮತ್ತು ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆಯ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ನಡಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಗದಗ: ಗದಗ ಜಿಲ್ಲೆಯ ನರಗುಂದ ತಾಲ್ಲೂಕು ಪಂಚಾಯತಿ ಎಕ್ಸಿಕ್ಯೂಟಿವ್ ಆಫೀಸರ್ ಅಶೋಕ್ ಪಾಟೀಲ್ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.

ವಿಜಯಪುರ. ವಿಜಯಪುರದಲ್ಲೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿಗಳಿಕೆ ಆರೋಪದ ಹಿನ್ನೆಲೆ, ನೀರಾವರಿ ಇಲಾಖೆ ಎಂಜಿನಿಯರಿಂಗ್ ವಿಭಾಗದ ಸೂಪರಿಂಟೆಂಡೆಂಟ್ ಸೋಮಪ್ಪ ಮನೆ ಮೇಲೆ ದಾಳಿ ಮಾಡಿದ್ದಾರೆ. ವಿಜಯಪುರ ಹೊರವಲಯದ ಬಾರಾಕುಟ್ರಿ ತಾಂಡಾ ಬಳಿಯ ಸೋಮಪ್ಪ ನಿವಾಸದಲ್ಲಿ ಬೀಡುಬಿಟ್ಟ ಅಧಿಕಾರಿಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ: ಬಾಗಲಕೋಟೆಯಲ್ಲೂ ದಾಳಿ ಮುಂದುವರೆಸಿದ ಎಸಿಬಿ ಅಧಿಕಾರಿಗಳು, ಜಿಲ್ಲೆಯ ಮುಧೋಳ ನಗರದಲ್ಲಿನ, ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಅಶೋಕ ಪಾಟಿಲ್ ಎಂಬುವರ ಮನೆಗೆ ಲಗ್ಗೆಯಿಟ್ಟ ಎಸಿಬಿ ಅಧಿಕಾರಿಗಳು, ಆಸ್ತಿ ಪತ್ರಗಳು ಮತ್ತು ಇತರೆ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಎಸ್.ಪಿ. ವಂಶಿಕೃಷ್ಣ, ಎಸಿಬಿ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಇನ್ಸ್ ಪೆಕ್ಟರ್ ಗಳಾದ ರಾಘವೇಂದ್ರ ಹಳ್ಳೂರ, ಪ್ರಮೋದ ಎಲಿಗಾರ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.ಸಂಬಂಧಿತ ಟ್ಯಾಗ್ಗಳು

corruption ACB ಆದಾಯ ಅಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ