‘ಸಿಎಂ ಹೇಡಿತನದಿಂದ ವರ್ತಿಸುತ್ತಿದ್ದಾರೆ’-ಶೋಭಾ

04-01-2018 318
ನವದೆಹಲಿ: ದೀಪಕ್ ರಾವ್ ಹತ್ಯೆ ಖಂಡಿಸಿ, ಸಂಸತ್ನ ಗಾಂಧಿ ಪ್ರತಿಮೆ ಮುಂದೆ ರಾಜ್ಯ ಬಿಜೆಪಿ ಸಂಸದರ ನಿಯೋಗ ಪ್ರತಿಭಟನೆ ನಡೆಸಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಮತ್ತು ಇತರೆ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಸಿದ್ದರಾಮಯ್ಯ ಹೇಡಿತನದಿಂದ ವರ್ತಿಸುತ್ತಿದ್ದಾರೆ, ಹಿಂದೂ ಕಾರ್ಯಕರ್ತರನ್ನು ಕೊಲ್ಲಿಸುತ್ತಿದ್ದಾರೆ, ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ದೂರಿದ್ದಾರೆ.
ಇದೇ ವೇಳೆ ಸಂಸದ ಪ್ರಹ್ಲಾದ್ ಜೋಶಿ ಮಾತನಾಡಿ, ನಾನು ನೇರವಾಗಿ ಸಿಎಂ ಸಿದ್ದರಾಮಯ್ಯ ಮೇಲೆ ಆರೋಪಿಸುತ್ತೇನೆ, ಸಿಎಂ ಕೇರಳ ಮಾದರಿಯನ್ನು ಅನುಸರಿಸುತ್ತಿದ್ದಾರೆ, ಹಿಂದು ಕಾರ್ಯಕರ್ತರನ್ನು ಕೊಲೆ ಮಾಡಿ ಬಿಜೆಪಿ ಮಣಿಸುವ ತಂತ್ರ ಎಂದು ಆರೋಪಿಸಿ, ಎನ್.ಐ.ಎ ತನಿಖೆ ಮಾಡಿ ಪ್ರಕರಣವನ್ನು ಬೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ