ಕುಶಾಲನಗರ ಬಂದ್

kodagu: kushal nagar bandh

04-01-2018 314

ಕೊಡಗು: ಕೊಡಗು ಜಿಲ್ಲೆಯ ಕಾವೇರಿ ತಾಲ್ಲೂಕು ರಚನೆಗೆ ಆಗ್ರಹಿಸಿ, ಹೋರಾಟ ಮುಂದುವರೆದಿದ್ದು, 5ನೇ ಬಾರಿಗೆ ಕುಶಾಲನಗರವನ್ನು ಬಂದ್ ಮಾಡಿ ಪ್ರತಿಭಟಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ. ಅದಲ್ಲದೇ ಕುಶಾಲನಗರದ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಈ ಹಿಂದೆ ನಡೆದಿದ್ದ ಪ್ರಯತ್ನಗಳು ವಿಫಲವಾಗಿದ್ದು, ಕಾವೇರಿ ತಾಲ್ಲೂಕು ಘೋಷಣೆಯಾಗುವವರೆಗೂ ಹೋರಾಟ ಮುಂದುವರೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.ಸಂಬಂಧಿತ ಟ್ಯಾಗ್ಗಳು

kodagu protest ತಾಲ್ಲೂಕು ಕುಶಾಲನಗರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ