ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಪ್ರತಿಭಟನೆ

04-01-2018 287
ಬೆಳಗಾವಿ: ಬೆಳಗಾವಿಯಯಲ್ಲಿ 9 ಕೋಟಿ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ವಿಚಾರಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕ ಸಂಜಯ ಪಾಟೀಲ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ರಾಜಕೀಯ ತಿಕ್ಕಾಟ ತಾರಕಕ್ಕೇರಿದೆ. ಅಭಿವೃದ್ಧಿ ಕಾಮಗಾರಿಯೊಂದಕ್ಕೆ 9 ಕೋಟಿ ತಾವೇ ಬಿಡುಗಡೆ ಮಾಡಿಸಿದ್ದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ, ಶಾಸಕ ಸಂಜಯ ಪಾಟೀಲ್ ನೇತ್ರತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಎದರು ಪ್ರತಿಭಟನೆ ನಡೆಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಹೆಬ್ಬಾಳ್ಕರ್ ಅವರ ಕೈಗೊಂಬೆ ಆಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ